ಫಾರಡೆಯು ರಟ್ಟಿನ ಒಂದು ಕೊಳವೆಯ ಮೇಲೆ ಉದ್ದವಾದ ತಾಮ್ರದ ತಂತಿಯನ್ನು ಸುತ್ತಿದ. ತಂತಿ ಸುರುಳಿಗಳ ನಡುವೆ ಟ್ವೈನ್ ದಾರವನ್ನು ಮತ್ತು ಸುರುಳಿಗಳ ಪದರಗಳ ನದುವೆ ಕ್ಯಾಲಿಕೋ ಬಟ್ಟೆಯನ್ನು ಇರಿಸಿದ. ತಂತಿಯ ತುದಿಗಳನ್ನು ಗ್ಯಾಲ್ವನೋ ಮೀಟರ್ ಗೆ ಜೋಡಿಸಿದ. ದಂಡ ಕಾಂತದ ಒಂದು ದ್ರುವವನ್ನು ಸುರುಳಿಯೊಳಕ್ಕೆ ವೇಗವಾಗಿ ನುಗ್ಗಿಸಿದ. ಗ್ಯಾಲ್ವನೋಮೀಟರ್ ವಿದ್ಯುತ್ ಪ್ರವಾಹ ಉಂಟಾದುದನ್ನು ಸೂಚಿಸಿತು. ಕಾಂತವನ್ನು ಸುರುಳಿಯಿಂದ ಹೊರಗೆಳೆದ. ಗ್ಯಾಲ್ವನೋಮೀಟರ್ ಸೂಚಿಯು ವಿರುದ್ಧದಿಕ್ಕಿನಲ್ಲಿ ವಿಚಲನೆಯನ್ನು ಹೊಂದಿತು. ಕಾಂತದ ವೇಗವನ್ನು ಹೆಚ್ಚಿಸಿದಂತೆಲ್ಲಾ ಸೂಚಿಯ ವಿಚಲನೆಯ ಪ್ರಮಾಣವು ಹೆಚ್ಚಾಯಿತು. ಕಾಂತವು ಸುರುಳಿಯೊಳಗೆ ನಿಶ್ಚಲ ಸ್ಥಿತಿಯಲ್ಲಿದ್ದಾಗ ವಿದ್ಯುತ್ಪ್ರವಾಹವು ಇರುವುದಿಲ್ಲ ಎಂದು ಕಂಡುಕೊಂಡನು. ಕಾಂತವನ್ನು ಸ್ಥಿರವಾಗಿಟ್ಟು, ಸುರುಳಿಯು ಚಲಿಸುವಂತೆ ಮಾಡಿದ. ಫಲಿತಾಂಶ ಮೊದಲಿನಂತೆಯೇ ಇತ್ತು. ಕಾಂತಶಕ್ತಿಯು ಹೇಗೆ ವಿದ್ಯುತ್ತನ್ನು ಉತ್ಪಾದಿಸುತ್ತದೆ. ವಾಹಕ ಮತ್ತು ಕಾಂತಗಳ ನಡುವಿನ ಸಾಪೇಕ್ಷ ಚಲನೆಯಿಂದ ವಾಹಕದಲ್ಲಿ ವಿದ್ಯುತ್ ಉತ್ಪತ್ತಿಯಾಗುತ್ತದೆ ಎನ್ನುವ ಅಂಶವನ್ನು ಕಂಡುಕೊಂಡನು. <br> | ಫಾರಡೆಯು ರಟ್ಟಿನ ಒಂದು ಕೊಳವೆಯ ಮೇಲೆ ಉದ್ದವಾದ ತಾಮ್ರದ ತಂತಿಯನ್ನು ಸುತ್ತಿದ. ತಂತಿ ಸುರುಳಿಗಳ ನಡುವೆ ಟ್ವೈನ್ ದಾರವನ್ನು ಮತ್ತು ಸುರುಳಿಗಳ ಪದರಗಳ ನದುವೆ ಕ್ಯಾಲಿಕೋ ಬಟ್ಟೆಯನ್ನು ಇರಿಸಿದ. ತಂತಿಯ ತುದಿಗಳನ್ನು ಗ್ಯಾಲ್ವನೋ ಮೀಟರ್ ಗೆ ಜೋಡಿಸಿದ. ದಂಡ ಕಾಂತದ ಒಂದು ದ್ರುವವನ್ನು ಸುರುಳಿಯೊಳಕ್ಕೆ ವೇಗವಾಗಿ ನುಗ್ಗಿಸಿದ. ಗ್ಯಾಲ್ವನೋಮೀಟರ್ ವಿದ್ಯುತ್ ಪ್ರವಾಹ ಉಂಟಾದುದನ್ನು ಸೂಚಿಸಿತು. ಕಾಂತವನ್ನು ಸುರುಳಿಯಿಂದ ಹೊರಗೆಳೆದ. ಗ್ಯಾಲ್ವನೋಮೀಟರ್ ಸೂಚಿಯು ವಿರುದ್ಧದಿಕ್ಕಿನಲ್ಲಿ ವಿಚಲನೆಯನ್ನು ಹೊಂದಿತು. ಕಾಂತದ ವೇಗವನ್ನು ಹೆಚ್ಚಿಸಿದಂತೆಲ್ಲಾ ಸೂಚಿಯ ವಿಚಲನೆಯ ಪ್ರಮಾಣವು ಹೆಚ್ಚಾಯಿತು. ಕಾಂತವು ಸುರುಳಿಯೊಳಗೆ ನಿಶ್ಚಲ ಸ್ಥಿತಿಯಲ್ಲಿದ್ದಾಗ ವಿದ್ಯುತ್ಪ್ರವಾಹವು ಇರುವುದಿಲ್ಲ ಎಂದು ಕಂಡುಕೊಂಡನು. ಕಾಂತವನ್ನು ಸ್ಥಿರವಾಗಿಟ್ಟು, ಸುರುಳಿಯು ಚಲಿಸುವಂತೆ ಮಾಡಿದ. ಫಲಿತಾಂಶ ಮೊದಲಿನಂತೆಯೇ ಇತ್ತು. ಕಾಂತಶಕ್ತಿಯು ಹೇಗೆ ವಿದ್ಯುತ್ತನ್ನು ಉತ್ಪಾದಿಸುತ್ತದೆ. ವಾಹಕ ಮತ್ತು ಕಾಂತಗಳ ನಡುವಿನ ಸಾಪೇಕ್ಷ ಚಲನೆಯಿಂದ ವಾಹಕದಲ್ಲಿ ವಿದ್ಯುತ್ ಉತ್ಪತ್ತಿಯಾಗುತ್ತದೆ ಎನ್ನುವ ಅಂಶವನ್ನು ಕಂಡುಕೊಂಡನು. <br> |