ಇವರು ಮಂಡ್ಯ ಜಿಲ್ಲೆಯ ಕಿಕ್ಕೇರಿಯಲ್ಲಿ 26-1-1915ರಂದು ಜನಿಸಿದರು. ತಂದೆ ಹೆಸರು ಕಿಕ್ಕೇರಿ ಸುಬ್ಬರಾಯರು. ತಾಯಿಯವರು ಹೊಸ ಹೊಳಲು ನಾಗಮ್ಮನವರು. ಮೈಸೂರು, ಬೆಂಗಳೂರುಗಳಲ್ಲಿ ಅವರ ವಿದ್ಯಾಭ್ಯಾಸ ನಡೆದು, ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಜೂನಿಯರ್ ಬಿ.ಎ ಮುಗಿಸುವಲ್ಲಿ ಅವರ ಓದು (ಅಪೂರ್ಣ) ಮುಕ್ತಾಯವಾಯಿತು. 1936ರಲ್ಲಿ ವೆಂಕಮ್ಮನವರೊಂದಿಗೆ ವಿವಾಹವಾಯಿತು. ಈ ದಂಪತಿಗಳಿಗೆ ನಾಲ್ಕು ಗಂಡು ಮಕ್ಕಳು, ನಾಲ್ವರು ಹೆಣ್ಣುಮಕ್ಕಳು. 1937ರಲ್ಲಿ ಸರ್ಕಾರಿ ನೌಕರಿ ಸೇರಿ ಮೈಸೂರು, ನಂಜನಗೂಡು, ಬೆಂಗಳೂರಿನಲ್ಲಿ ತಮ್ಮ ಸೇವಾವಧಿ ಮುಗಿಸಿ 1970ರಲ್ಲಿ ನೌಕರಿಯಿಂದ ನಿವೃತ್ತರಾದರು. ಜೀವನದ ಉದ್ದಕ್ಕೂ ಆರ್ಥಿಕ ಕ್ಲೇಶ, ಸಾಂಸಾರಿಕ ತಾಪತ್ರಯಗಳಲ್ಲಿ ಬದುಕನ್ನು ತೇಯುತ್ತಾ ಬಂದರೂ ಅದರ ಚೆಲುವನ್ನು ತೆರೆದು ತೋರುತ್ತಾ, ಜೀವನ ಮುಖಿಯಾದ ಕಾವ್ಯವನ್ನು ತಮ್ಮ ವೈಯಕ್ತಿಕ ಬದುಕಿನ ನೆಲೆಯಿಂದಲೇ ಹೆಕ್ಕುತ್ತಾ ಹೋದದ್ದು ಈ ಕವಿಯ ವೈಶಿಷ್ಟ್ಯ. | ಇವರು ಮಂಡ್ಯ ಜಿಲ್ಲೆಯ ಕಿಕ್ಕೇರಿಯಲ್ಲಿ 26-1-1915ರಂದು ಜನಿಸಿದರು. ತಂದೆ ಹೆಸರು ಕಿಕ್ಕೇರಿ ಸುಬ್ಬರಾಯರು. ತಾಯಿಯವರು ಹೊಸ ಹೊಳಲು ನಾಗಮ್ಮನವರು. ಮೈಸೂರು, ಬೆಂಗಳೂರುಗಳಲ್ಲಿ ಅವರ ವಿದ್ಯಾಭ್ಯಾಸ ನಡೆದು, ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಜೂನಿಯರ್ ಬಿ.ಎ ಮುಗಿಸುವಲ್ಲಿ ಅವರ ಓದು (ಅಪೂರ್ಣ) ಮುಕ್ತಾಯವಾಯಿತು. 1936ರಲ್ಲಿ ವೆಂಕಮ್ಮನವರೊಂದಿಗೆ ವಿವಾಹವಾಯಿತು. ಈ ದಂಪತಿಗಳಿಗೆ ನಾಲ್ಕು ಗಂಡು ಮಕ್ಕಳು, ನಾಲ್ವರು ಹೆಣ್ಣುಮಕ್ಕಳು. 1937ರಲ್ಲಿ ಸರ್ಕಾರಿ ನೌಕರಿ ಸೇರಿ ಮೈಸೂರು, ನಂಜನಗೂಡು, ಬೆಂಗಳೂರಿನಲ್ಲಿ ತಮ್ಮ ಸೇವಾವಧಿ ಮುಗಿಸಿ 1970ರಲ್ಲಿ ನೌಕರಿಯಿಂದ ನಿವೃತ್ತರಾದರು. ಜೀವನದ ಉದ್ದಕ್ಕೂ ಆರ್ಥಿಕ ಕ್ಲೇಶ, ಸಾಂಸಾರಿಕ ತಾಪತ್ರಯಗಳಲ್ಲಿ ಬದುಕನ್ನು ತೇಯುತ್ತಾ ಬಂದರೂ ಅದರ ಚೆಲುವನ್ನು ತೆರೆದು ತೋರುತ್ತಾ, ಜೀವನ ಮುಖಿಯಾದ ಕಾವ್ಯವನ್ನು ತಮ್ಮ ವೈಯಕ್ತಿಕ ಬದುಕಿನ ನೆಲೆಯಿಂದಲೇ ಹೆಕ್ಕುತ್ತಾ ಹೋದದ್ದು ಈ ಕವಿಯ ವೈಶಿಷ್ಟ್ಯ. |