ಬದಲಾವಣೆಗಳು

Jump to navigation Jump to search
ಹೊಸ ಪುಟ: ದ್ರಾವಿಡ ಭಾಷೆಗಳಲ್ಲಿ ಬಹಳ ಹಳೆಯದರಲ್ಲಿ ಒಂದಾದ ಕನ್ನಡ ಭಾಷೆ/ನುಡಿಯನ್ನು ಅದ...
ದ್ರಾವಿಡ ಭಾಷೆಗಳಲ್ಲಿ ಬಹಳ ಹಳೆಯದರಲ್ಲಿ ಒಂದಾದ ಕನ್ನಡ ಭಾಷೆ/ನುಡಿಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ ಜನರು ಆಡುನುಡಿಯಾಗಿ ಬಳಸುತ್ತಿದ್ದಾರೆ. ಇದು ಭಾರತದ ೨೨ ಅಧಿಕೃತ ಭಾಷೆಗಳಲ್ಲಿ ಪ್ರಮುಖವಾದುದು ಹಾಗೂ ಕರ್ನಾಟಕ ರಾಜ್ಯದ ಅಧಿಕೃತ/ಆಡಳಿತ ಭಾಷೆ.
ಕನ್ನಡವು ದಕ್ಷಿಣ ಭಾರತದ ಭಾಷೆಗಳ ಮೂಲವೆಂದು ಗುರುತುಸಲ್ಪಟ್ಟಿರುವ ಮೂಲದ್ರಾವಿಡದಿಂದ ಯಾವಾಗ ಆಡುಭಾಷೆಯಾಗಿ ಪರಿವರ್ತಿತವಾಯಿತೆಂದು ಖಚಿತವಾಗಿ ಹೇಳಲು ಖಚಿತವಾಗಿ ಸಾಧ್ಯವಿಲ್ಲ. ತಮಿಳು ಭಾಷೆಯು ದ್ರಾವಿಡ ಭಾಷೆಯಿಂದ ಬೇರ್ಪಟ್ಟ ಸಮಯದಲ್ಲಿಯೇ ಕನ್ನಡವು ಕೂಡ ಆಡುಭಾಷೆಯಾಗಿ ಬೇರ್ಪಟ್ಟಿತೆಂದು ಹೇಳಲಾಗುತ್ತದೆ. ಈ ಭಾಷೆಯ ಲಿಪಿಯು ಸುಮಾರು ೧೫೦೦-೧೬೦೦ ವರ್ಷಗಳಿಗಿಂತಲೂ ಹಿಂದಿನದು. ಐದನೆಯ ಶತಮಾನದ ಹಲ್ಮಿಡಿ ಶಾಸನದ ಸಮಯಕ್ಕಾಗಲೇ ಕನ್ನಡವು ಸಾಕಷ್ಟು ಅಭಿವೃದ್ಧಿ ಹೊಂದಿತ್ತು. ಲಿಪಿಯ ಉಗಮದ ಇತಿಹಾಸವನ್ನು ಗಮನಿಸಿದರೆ, ತಮಿಳಿಗಿಂತಲೂ ಕನ್ನಡದ ಲಿಪಿಯೇ ಮೊಟ್ಟ ವೊದಲಿಗೆ ಹೆಚ್ಚು ಪ್ರವರ್ಧಮಾನಕ್ಕೆ ಬಂದಂತೆ ಕಾಣಿಸುತ್ತದೆ.

ಸಂಚರಣೆ ಪಟ್ಟಿ