"ಮನೆ ಮದ್ದುಗಳು" ಆವೃತ್ತಿಗಳ ಮಧ್ಯದ ಬದಲಾವಣೆಗಳು
೧೫ ನೇ ಸಾಲು: | ೧೫ ನೇ ಸಾಲು: | ||
'''ಶಮನ''' : ರಕ್ತಹೀನತೆ, ಗಾಯದ ನೋವು, ರಕ್ತಸ್ರಾವ.<br> | '''ಶಮನ''' : ರಕ್ತಹೀನತೆ, ಗಾಯದ ನೋವು, ರಕ್ತಸ್ರಾವ.<br> | ||
ಊಟದ ಜತೆ ಹಲವು ದಿನಗಳವರೆಗೆ ಪ್ರತಿನಿತ್ಯ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ರಕ್ತಹೀನತೆ ವಾಸಿಯಾಗುತ್ತದೆ. ಪಟಾಕಿ ಸಿಡಿದು ಉಂಟಾದ ಗಾಯಗಳಿಗೆ ಈರುಳ್ಳಿಯನ್ನು ಜಜ್ಜಿ ಕಟ್ಟುವುದರಿಂದ ನೋವು ಕಡಿಮೆಯಾಗುತ್ತದೆ. ಮೂಗಿನಿಂದ ಆಗಾಗ್ಗೆ ರಕ್ತ ಒಸರುತ್ತಿದ್ದರೆ, ಮೂಗಿಗೆ ಒಂದೆರಡು ತೊಟ್ಟು ಈರುಳ್ಳಿ ರಸವನ್ನು ಹಾಕುವುದರಿಂದ ರಕ್ತ ಒಸರುವುದು ನಿಲ್ಲುವುದು. | ಊಟದ ಜತೆ ಹಲವು ದಿನಗಳವರೆಗೆ ಪ್ರತಿನಿತ್ಯ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ರಕ್ತಹೀನತೆ ವಾಸಿಯಾಗುತ್ತದೆ. ಪಟಾಕಿ ಸಿಡಿದು ಉಂಟಾದ ಗಾಯಗಳಿಗೆ ಈರುಳ್ಳಿಯನ್ನು ಜಜ್ಜಿ ಕಟ್ಟುವುದರಿಂದ ನೋವು ಕಡಿಮೆಯಾಗುತ್ತದೆ. ಮೂಗಿನಿಂದ ಆಗಾಗ್ಗೆ ರಕ್ತ ಒಸರುತ್ತಿದ್ದರೆ, ಮೂಗಿಗೆ ಒಂದೆರಡು ತೊಟ್ಟು ಈರುಳ್ಳಿ ರಸವನ್ನು ಹಾಕುವುದರಿಂದ ರಕ್ತ ಒಸರುವುದು ನಿಲ್ಲುವುದು. | ||
+ | ==ಕಡಲೆಕಾಳು== | ||
+ | '''ವಸ್ತು''' : ಕಡಲೆಕಾಳು | ||
+ | '''ಉಪಯೋಗ''' : ತೂಕ ಹೆಚ್ಚಳ, ಬಿಕ್ಕಳಿಕೆಗೆ ಕಡಿವಾಣ.<br> | ||
+ | ಕಡಲೇಬೇಳೆಯನ್ನು ಚೆನ್ನಾಗಿ ಬೇಯಿಸಿ ಬೆಲ್ಲದೊಡನೆ ರುಬ್ಬಿ ತಯಾರಿಸಿದ ಹೂರಣವನ್ನು ಮಿತ ಪ್ರಮಾಣದಲ್ಲಿ ಹಲವು ದಿವಸ ತಿಂದರೆ ಶರೀರದ ತೂಕವು ಹೆಚ್ಚಾಗುವುದು. ಹುರಿದ ಕಡಲೆಯ ಹಿಟ್ಟನ್ನು ಕೆಂಡದ ಮೇಲೆ ಹಾಕಿ ಬಂದ ಹೊಗೆಯನ್ನು ಕುಡಿಯುವುದರಿಂದ ಬಿಕ್ಕಳಿಕೆ ನಿಲ್ಲುತ್ತದೆ. | ||
+ | ==ಹಲಸಿನ ಹಣ್ಣು== | ||
+ | '''ವಸ್ತು''' : ಹಲಸಿನ ಹಣ್ಣು | ||
+ | '''ಶಮನ''' : ತಲೆನೋವು, ನಿತ್ರಾಣ | ||
+ | ಸಾಮಾನ್ಯ ತಲೆನೋವು ಇರುವಾಗ, ಸ್ವಲ್ಪ ತುಪ್ಪದೊಡನೆ ಬೆಲ್ಲ ಸೇರಿಸಿ ಸೇವಿಸುವುದರಿಂದ ತಲೆನೋವು ಕಡಿಮೆಯಾಗುತ್ತದೆ. ಗರ್ಭಿಣಿಯರಿಗೆ ಮತ್ತು ಇತರರಿಗೆ ಆಗಾಗ್ಗೆ ನಿತ್ರಾಣವೆನಿಸಿದಾಗ ಬಿಸಿ ಹಾಲಿನ ಜೊತೆ ಸ್ವಲ್ಪ ಬೆಲ್ಲ ಸೇರಿಸಿ ಕುಡಿಯುವುದರಿಂದ ಚೈತನ್ಯ ಮೂಡುವುದು. |
೧೫:೪೭, ೧೨ ಅಕ್ಟೋಬರ್ ೨೦೧೫ ನಂತೆ ಪರಿಷ್ಕರಣೆ
ಸೌತೆಕಾಯಿ
ವಸ್ತು : ಸೌತೆಕಾಯಿ
ಉಪಯೋಗ : ಜೀರ್ಣಶಕ್ತಿ ಹೆಚ್ಚಳ ಮತ್ತು ಉತ್ತಮ ನಿದ್ರೆ.
ಸೌತೆಕಾಯಿಯನ್ನು ಸಿಪ್ಪೆ ಸಹಿತ ಕತ್ತರಿಸಿ ಕಾಳುಮೆಣಸಿನ ಪುಡಿ ಮತ್ತು ಉಪ್ಪಿನೊಂದಿಗೆ ಸೇರಿಸಿಕೊಂಡು ತಿನ್ನುತ್ತಾ ಬಂದರೆ ಜೀರ್ಣಶಕ್ತಿ ಹೆಚ್ಚುವುದು. ಸೌತೆಕಾಯಿ ತಿರುಳಿನಿಂದ ಅಂಗಾಲು ಉಜ್ಜಿಕೊಂಡರೆ ಕಣ್ಣುಗಳ ಉರಿ ಶಾಂತವಾಗಿ ಚೆನ್ನಾಗಿ ನಿದ್ದೆ ಬರುತ್ತದೆ. ಮುಖದ ಚರ್ಮದ ಮೇಲೆ ಸೌತೆಕಾಯಿ ಚೂರುಗಳನ್ನು ತಿಕ್ಕಿದರೆ ಮುಖ ಕಾಂತಿಯುಕ್ತವಾಗುವುದು.
ಏಲಕ್ಕಿ
ವಸ್ತು : ಏಲಕ್ಕಿ
ಶಮನ : ಅಜೀರ್ಣದ ಸಮಸ್ಯೆಯಿಂದ ಬಳಲುತ್ತಿರುವವರು ಏಲಕ್ಕಿ ಸೇವಿಸಿದರೆ ಶಮನಗೊಳ್ಳುವುದು. ಏಲಕ್ಕಿ ಯಿಂದ ಆಹಾರ ಜೀರ್ಣವಾಗಿ ಬಾಯಿಗೆ ರುಚಿಯುಂಟಾಗುತ್ತದೆ. ಒಣಕೆಮ್ಮು ಕಾಣಿಸಿಕೊಂಡಾಗ ಏಲಕ್ಕಿ ಪುಡಿಗೆ ಸ್ವಲ್ಪ ಶುಂಠಿ ಪುಡಿಯನ್ನು ಸೇರಿಸಿ ಸೇವಿಸಿದರೆ ಪರಿಣಾಮ ಬೀರುವುದು. ಮೇಲಿಂದ ಮೇಲೆ ಭೇದಿಯಾಗುತ್ತಿದ್ದರೆ ಸ್ವಲ್ಪ ಏಲಕ್ಕಿಯನ್ನು ಬೆಣ್ಣೆಯೊಡನೆ ಅರೆದು ತಿನ್ನುವುದರಿಂದ ಭೇದಿ ಕಡಿಮೆಯಾಗುತ್ತದೆ.
ಮೆಣಸು
ವಸ್ತು : ಮೆಣಸು
ಶಮನ : ಅಜೀರ್ಣ, ಮೊಡವೆ, ಜಂತುಹುಳು.
ಮೆಣಸನ್ನು ಚೆನ್ನಾಗಿ ಪುಡಿ ಮಾಡಿ ಶುಂಠಿಯ ರಸದೊಡನೆ ಸೇವಿಸುವುದರಿಂದ ಅಜೀರ್ಣವು ನಿವಾರಣೆಯಾಗುತ್ತದೆ. ಕೆಲವು ಮೆಣಸಿನ ಕಾಳುಗಳನ್ನು ನೀರಿನಲ್ಲಿ ತೇಯ್ದು ಮೊಡವೆಗಳಿರುವ ಜಾಗಕ್ಕೆ ಹಚ್ಚಿದರೆ ವಾಸಿಯಾಗುತ್ತವೆ. ಹೊಟ್ಟೆಯಲ್ಲಿ ಜಂತುಹುಳುಗಳ ಉಪಟಳ ಜಾಸ್ತಿಯಾದಾಗ ಬೆಳಗ್ಗೆ ಮತ್ತು ರಾತ್ರಿ ಮೆಣಸಿನ ಕಷಾಯವನ್ನು ಕುಡಿಯುವುದು ಪರಿಣಾಮಕಾರಿ.
ಈರುಳ್ಳಿ
ವಸ್ತು : ಈರುಳ್ಳಿ
ಶಮನ : ರಕ್ತಹೀನತೆ, ಗಾಯದ ನೋವು, ರಕ್ತಸ್ರಾವ.
ಊಟದ ಜತೆ ಹಲವು ದಿನಗಳವರೆಗೆ ಪ್ರತಿನಿತ್ಯ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ರಕ್ತಹೀನತೆ ವಾಸಿಯಾಗುತ್ತದೆ. ಪಟಾಕಿ ಸಿಡಿದು ಉಂಟಾದ ಗಾಯಗಳಿಗೆ ಈರುಳ್ಳಿಯನ್ನು ಜಜ್ಜಿ ಕಟ್ಟುವುದರಿಂದ ನೋವು ಕಡಿಮೆಯಾಗುತ್ತದೆ. ಮೂಗಿನಿಂದ ಆಗಾಗ್ಗೆ ರಕ್ತ ಒಸರುತ್ತಿದ್ದರೆ, ಮೂಗಿಗೆ ಒಂದೆರಡು ತೊಟ್ಟು ಈರುಳ್ಳಿ ರಸವನ್ನು ಹಾಕುವುದರಿಂದ ರಕ್ತ ಒಸರುವುದು ನಿಲ್ಲುವುದು.
ಕಡಲೆಕಾಳು
ವಸ್ತು : ಕಡಲೆಕಾಳು
ಉಪಯೋಗ : ತೂಕ ಹೆಚ್ಚಳ, ಬಿಕ್ಕಳಿಕೆಗೆ ಕಡಿವಾಣ.
ಕಡಲೇಬೇಳೆಯನ್ನು ಚೆನ್ನಾಗಿ ಬೇಯಿಸಿ ಬೆಲ್ಲದೊಡನೆ ರುಬ್ಬಿ ತಯಾರಿಸಿದ ಹೂರಣವನ್ನು ಮಿತ ಪ್ರಮಾಣದಲ್ಲಿ ಹಲವು ದಿವಸ ತಿಂದರೆ ಶರೀರದ ತೂಕವು ಹೆಚ್ಚಾಗುವುದು. ಹುರಿದ ಕಡಲೆಯ ಹಿಟ್ಟನ್ನು ಕೆಂಡದ ಮೇಲೆ ಹಾಕಿ ಬಂದ ಹೊಗೆಯನ್ನು ಕುಡಿಯುವುದರಿಂದ ಬಿಕ್ಕಳಿಕೆ ನಿಲ್ಲುತ್ತದೆ.
ಹಲಸಿನ ಹಣ್ಣು
ವಸ್ತು : ಹಲಸಿನ ಹಣ್ಣು ಶಮನ : ತಲೆನೋವು, ನಿತ್ರಾಣ ಸಾಮಾನ್ಯ ತಲೆನೋವು ಇರುವಾಗ, ಸ್ವಲ್ಪ ತುಪ್ಪದೊಡನೆ ಬೆಲ್ಲ ಸೇರಿಸಿ ಸೇವಿಸುವುದರಿಂದ ತಲೆನೋವು ಕಡಿಮೆಯಾಗುತ್ತದೆ. ಗರ್ಭಿಣಿಯರಿಗೆ ಮತ್ತು ಇತರರಿಗೆ ಆಗಾಗ್ಗೆ ನಿತ್ರಾಣವೆನಿಸಿದಾಗ ಬಿಸಿ ಹಾಲಿನ ಜೊತೆ ಸ್ವಲ್ಪ ಬೆಲ್ಲ ಸೇರಿಸಿ ಕುಡಿಯುವುದರಿಂದ ಚೈತನ್ಯ ಮೂಡುವುದು.