ಆದರ್ಶ ಶಿಕ್ಷಕ ಸರ್ವೇಪಲ್ಲಿ ರಾಧಕೃಷ್ಣ
ಪರಿಕಲ್ಪನಾ ನಕ್ಷೆ
<mm>Flash</mm>
ಹಿನ್ನೆಲೆ/ಸಂದರ್ಭ
ಕಲಿಕೋದ್ದೇಶಗಳು
ಕವಿ ಪರಿಚಯ
ಶಿಕ್ಷಕರಿಗೆ ಟಿಪ್ಪಣಿ
ಭಾರತ ದೇಶದ ಬಡ ಕುಟುಂಬದಲ್ಲಿ ಜನಿಸಿ ಇಚ್ಚಾಶಕ್ತಿ, ಕ್ರಿಯಾಶಕ್ತಿ ಮತ್ತು ಜ್ಞಾನ ಶಕ್ತಿ ಇದ್ದರೆ ಏನು ಬೇಕಾದರು ಸಾಧಿಸಬಹುದು ಎನ್ನುವುದಕ್ಕೆ ಬಹುದೊಡ್ಡ ಉದಾಹರಣೆಯಾಗಿ ನಿಲ್ಲುತ್ತಾರೆ ನಮ್ಮ ಶಿಕ್ಷಕ, ಶಿಕ್ಷಣ ತಜ್ಞ, ತತ್ವಜ್ಞಾನಿ ಮತ್ತು ಭಾರತ ಕಂಡ ಮೊದಲ ಉಪರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್.
ಶಿಕ್ಷಕರೆಡೆಗೆ ಅಪಾರ ಗೌರವ, ಪ್ರೀತಿ. ನಿಷ್ಠೆ ಹೊಂದಿದ್ದ, ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರು. ಅಂತಲೇ, ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಾ ಅವರು ಗೈದಿರುವ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಅವರ ಜೀವನ ಕುರಿತಾದ ಒಂದು ಇಣುಕುನೋಟ.
ಸರ್ವಪಲ್ಲಿ ರಾಧಾಕೃಷ್ಣನ್ ಜನಿಸಿದ್ದು ದಕ್ಷಿಣ ಭಾರತದ ತಮಿಳುನಾಡಿನ ತಿರುತ್ತಣಿ ಎಂಬಲ್ಲಿ ಸೆಪ್ಟೆಂಬರ್ 5, 1888ರಲ್ಲಿ. ಸರ್ವಪಲ್ಲಿ ಎನ್ನುವುದು ಮನೆತನದ ಹೆಸರಾದರೆ, ರಾಧಾಕೃಷ್ಣನ್ ಎನ್ನುವುದು ಅವರ ತಂದೆ-ತಾಯಿ ಇಟ್ಟ ಮುದ್ದಿನ ಹೆಸರು.
ತಂದೆ ಸರ್ವಪಲ್ಲಿ ವೀರಸ್ವಾಮಿ ಅವರು ಜಮೀನ್ದಾರರ ಬಳಿ ದಿನಗೂಲಿ ನೌಕರರಾಗಿ ಸೇವೆಗೈಯುತ್ತಾ ಮಗನ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು. ಬರುವ ದಿನಗೂಲಿಯಲ್ಲಿ ತುಂಬು ಕುಟುಂಬವನ್ನು ಸಾಗಿಸಲು ಕಷ್ಟವಾದ ಸಂದರ್ಭದಲ್ಲಿ ರಾಧಾಕೃಷ್ಣನ್‌ಗೆ ಓದಬೇಕೆನ್ನುವ ಅಪಾರ ಹಂಬಲ, ಸ್ಕಾಲರ್‌ಶಿಪ್ ಹಣದಲ್ಲಿಯೇ ಎಲ್ಲ ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢಶಾಲೆಯ ಶಿಕ್ಷಣವನ್ನು ಮುಗಿಸಿದ ರಾಧಾಕೃಷ್ಣನ್, ಮದ್ರಾಸ್ (ಈಗಿನ ಚೆನ್ನೈ) ಕ್ರಿಶ್ಚಿಯನ್ ಕಾಲೇಜ್‌ನಲ್ಲಿ 'ತತ್ವಜ್ಞಾನ' ವಿಷಯದ ಮೇಲೆ ಬಿ.ಎ ಮತ್ತು ಎಂ.ಎ. ಪದವಿಯನ್ನು ಸಂಪಾದಿಸಿಕೊಂಡರು.
ಸ್ನಾತಕೋತ್ತರ ಪದವಿಯಲ್ಲಿ ರಾಧಾಕೃಷ್ಣನ್ ಮಂಡಿಸಿದ ಪ್ರಬಂಧ 'ದಿ ಎಥಿಕ್ಸ್ ಆಫ್ ವೇದಾಂತ್' ಅವರ ಬದುಕಿನ ದಿಕ್ಕನ್ನೇ ಬದಲಾಯಿಸಿತು. ಕೇವಲ 20 ವರ್ಷದ ಬಾಲಕನ ತಲೆಯಲ್ಲಿದ್ದ ಸಿದ್ಧಾಂತ, ವೇದಾಂತ ವಿಚಾರಗಳು ಮುಂದೊಂದು ದಿನ ಅವರನ್ನು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತವೆ ಎಂದು ಅವರ ಕಾಲೇಜು ಶಿಕ್ಷಕರು ಆಗಲೇ ಗುರುತಿಸಿದ್ದರು.
ವೆಲ್ಲೂರಿನಲ್ಲಿರುವಾಗಲೇ ಕೇವಲ 16ನೇ ವಯಸ್ಸಿನಲ್ಲಿ ಶಿವಕಾಮುಮ್ಮ ಎಂಬುವವರನ್ನು ಬಾಳಸಂಗಾತಿಯನ್ನಾಗಿಸಿಕೊಂಡ ರಾಧಾಕೃಷ್ಣನ್, 1909ರಲ್ಲಿ ಮದ್ರಾಸ್ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸಹಾಯಕ ಉಪನ್ಯಾಸಕರಾಗಿ ಅಚ್ಚುಮೆಚ್ಚಿನ ಶಿಕ್ಷಕ ಸೇವೆಯನ್ನಾರಂಭಿಸಿದರು.
ಭಾರತದ ಸನಾತನ ಧರ್ಮವಾದ ಹಿಂದೂ ಧರ್ಮದ ಸಾರ, ವೇದ, ಉಪನಿಷತ್, ಜೈನ ತತ್ವಜ್ಞಾನ, ಶಂಕರ ರಾಮಾನುಜ, ಮಧ್ವ, ಪ್ಲೂಟೋ, ಪ್ಲಾಟಿನಸ್, ಕಾಂತ್, ಬ್ರ್ಯಾಡ್ಲೆ ಮುಂತಾದ ಮಹನೀಯರ ತತ್ವಜ್ಞಾನವನ್ನು ಆಳವಾಗಿ ಅಧ್ಯಯನ ಕೈಗೊಂಡರು. ಸತತ ಅಧ್ಯಯನ ಮತ್ತು ಕಠಿಣ ಪರಿಶ್ರಮದಿಂದ ಹಂತ ಹಂತವಾಗಿ ಮೇಲೇರುತ್ತಾ ಮುನ್ನಡೆದ ರಾಧಾಕೃಷ್ಣನ್, 1918ರಲ್ಲಿ ಮೈಸೂರು ವಿಶ್ವವಿದ್ಯಾಲಯದ ತತ್ವಜ್ಞಾನ ವಿಭಾಗದ ಉಪನ್ಯಾಸಕರಾಗಿ ಆಯ್ಕೆಯಾದರು. ದೇಶ ವಿದೇಶಗಳ ವಿವಿಧ ತತ್ವಜ್ಞಾನ ಪತ್ರಿಕೆಗಳಲ್ಲಿ ತಮ್ಮ ಆಳ ಮತ್ತು ಹರಿತವಾದ ವಿಚಾರಗಳನ್ನು ಹೊಂದಿದ್ದ ಲೇಖನಗಳನ್ನು ಬರೆಯುತ್ತಾ ಸಾಗಿದ ರಾಧಾಕೃಷ್ಣನ್, 'ದಿ ಫಿಲಾಸಫಿ ಆಫ್ ರವೀಂದ್ರನಾಥ್ ಠ್ಯಾಗೋರ್' ಎಂಬ ಮೊದಲ ಪುಸ್ತಕ ಬರೆದರು.
ಭಾರತೀಯ ಪುಸ್ತಕೋದ್ಯಮದಲ್ಲಿ ಮಿಂಚುತ್ತಾ ಸಾಗಿದ ಇವರು, ಮುಂದೆ 'ಜಿನೀನ್ ಮೆನಿಫೆಸ್ಟೇಷನ್ ಆಫ್ ಇಂಡಿಯನ್ ಸ್ಪಿರಿಟ್' ಮತ್ತು 'ದಿ ರೀಜನ್ ಆಫ್ ರಿಲಿಜಿಯನ್ ಇನ್ ಕಾಂಟೆಂಪರರಿ ಫಿಲಾಸಫಿ' ಎನ್ನುವ ಪುಸ್ತಕಗಳನ್ನು ಸಹ ಬರೆದಿದ್ದಾರೆ.
'Do not sit like a Rock, Do work as a Clock' ಎನ್ನುವ ಮಾತಿಗೆ ಉತ್ತಮ ನಿದರ್ಶನವಾದ ರಾಧಾಕೃಷ್ಣನ್, ತಮ್ಮ ಅಪಾರವಾದ ಪಾಂಡಿತ್ಯದಿಂದಾಗಿ ದೇಶವಿದೇಶಗಳಲ್ಲಿ ಮನೆಮಾತಾಗಿದ್ದರು. ಇವರ ತತ್ವಜ್ಞಾನಕ್ಕೆ ಶರಣಾದ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ 'ಧರ್ಮ ಮತ್ತು ನೀತಿಶಾಸ್ತ್ರ' ಎನ್ನುವ ವಿಷಯದ ಮೇಲೆ ಉಪನ್ಯಾಸ ನೀಡುವಂತೆ ಆಹ್ವಾನಿಸಿತು. ಸಪ್ತಸಾಗರಗಳಾಚೆ ಭಾರತದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದು, ಭಾರತೀಯ ಸ್ವಾತಂತ್ರ್ಯಕ್ಕಾಗಿಯೂ ಹೋರಾಡಿದ ರಾಧಾಕೃಷ್ಣನ್, ಭಾರತೀಯ ಸನಾತನ ಧರ್ಮ, ತತ್ವಜ್ಞಾನ ಕುರಿತು ವಿದೇಶಿಯರಿಗೆ ಮನಮುಟ್ಟುವಂತೆ ಮನವರಿಕೆ ಮಾಡಿಕೊಟ್ಟು ಬಂದರು.
1931ರಲ್ಲಿ ಆಂಧ್ರ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಆಯ್ಕೆಯಾದ ರಾಧಾಕೃಷ್ಣನ್, ಐದು ವರ್ಷಗಳ ಕಾಲ ತಾವೊಬ್ಬ ಉತ್ತಮ ಶಿಕ್ಷಣ ಸುಧಾರಕರೂ ಹೌದು ಎಂಬುದನ್ನು ತಮ್ಮ ಸೇವಾವಧಿಯಲ್ಲಿ ತೋರಿಸಿಕೊಟ್ಟರು. ಇವರ ಅವಧಿಯಲ್ಲಿ ವಿಶ್ವವಿದ್ಯಾಲಯ ಅನೇಕ ಶಿಕ್ಷಣ ಮತ್ತು ಶಿಕ್ಷಣೇತರ ಸುಧಾರಣೆಗಳನ್ನು ಕಂಡಿತು.
1939ರಲ್ಲಿ ಬನಾರಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಆಯ್ಕೆಯಾದರು. ಅಲ್ಲಿಯೂ ತಮ್ಮ ಅನುಭವವನ್ನು ಧಾರೆ ಎರೆಯುವ ಮೂಲಕ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ರಾಧಾಕೃಷ್ಣನ್ ಅವರನ್ನು, 1948ರಲ್ಲಿ ವಿಶ್ವವಿದ್ಯಾಲಯ ಶಿಕ್ಷಣ ಆಯೋಗದ ಮುಖ್ಯಸ್ಥರನ್ನಾಗಿ ಸರಕಾರ ನೇಮಿಸಿತು. 1949ರಲ್ಲಿ ಸೋವಿಯತ್ ರಷ್ಯಾಕ್ಕೆ ಭಾರತದ ರಾಯಭಾರಿಯಾಗಿ ನೇಮಕಗೊಂಡ ರಾಧಾಕೃಷ್ಣನ್, ಸ್ಟಾಲಿನ್‌ನಂತಹ ಮೇಧಾವಿಗಳ ಸರಿಸಮನಾಗಿ ನಿಲ್ಲುವ ವ್ಯಕ್ತಿತ್ವವನ್ನು ಬೆಳೆಸಿಕೊಂಡರು.
'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' ೧ (Kannada: ಸರ್ವಪಲ್ಲಿ ರಾಧಾಕೃಷ್ಣನ್) (ಜನನ : ೫ ನೇ ಸೆಪ್ಟೆಂಬರ್, ೧೮೮೮.) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರು ವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ. ಶಿಕ್ಷಕರಾಗಿದ್ದ 'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' ೧೯೬೨ ರಲ್ಲಿ ಭಾರತದ ರಾಷ್ಟ್ರಪತಿಯಾದಾಗ ಇವರ ಶಿಷ್ಯರು ಮತ್ತು ಸ್ನೇಹಿತರು ಸೆಪ್ಟೆಂಬರ್ ೫ ರಂದು ತಮ್ಮ ಹುಟ್ಟಿದ ದಿನವನ್ನು ಆಚರಿಸಲು ಹೇಳಿದಾಗ ತಮ್ಮ ಶಿಕ್ಷಕ ಹುದ್ದೆಯನ್ನು ಅಪಾರ ಗೌರವಿಸುತಿದ್ದ ರಾಧಾಕೃಷ್ಣನ್ ನೀವು ನನ್ನ ಹುಟ್ಟಿದ ದಿನವನ್ನು ಬೇರೆಯಾಗಿಯೇ ಆಚರಿಸುವುದಾದರೆ ಇಂದಿನಿಂದ "ಸೆಪ್ಟೆಂಬರ್ ೫ "ನ್ನು 'ಶಿಕ್ಷಕರ ದಿನ'ವನ್ನಾಗಿ ಆಚರಿಸಲು ಹೇಳಿದರು. ಅಂದಿನಿಂದ(1962) ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಾ ಅವರು ಗೈದಿರುವ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ. ವಿಶ್ವದ ಎಲ್ಲ ದೇಶಗಳಲ್ಲಿ ಶಿಕ್ಷಕರ ದಿನವನ್ನು ಬೇರೆ ಬೇರೆ ದಿನಾಂಕಗಳಂದು ಆಚರಿಸಲಾಗುತ್ತಿದ್ದರೂ, ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಲ್ಲಿ ಪ್ರತಿ ವರ್ಷ ಅಕ್ಟೋಬರ್ ೫ ರಂದು "ವಿಶ್ವ ಶಿಕ್ಷಕರ ದಿನ" ವನ್ನು ಆಚರಿಸಬೇಕೆಂದು "ಯುನೆಸ್ಕೋ " ಕರೆ ನೀಡಿದೆ. ೧೯೬೬ ರರ ಅಕ್ಟೋಬರ್ ೫ ರಂದು ಯುನೆಸ್ಕೋ ಮತ್ತು ವಿಶ್ವ ಕಾರ್ಮಿಕ ಸಂಸ್ಥೆಯ ನಡುವಿನ ಒಪ್ಪಂದದ ಪ್ರಕಾರ ೧೯೯೪ ರ ಅಕ್ಟೋಬರ್ ೫ ರಿಂದ "ವಿಶ್ವ ಶಿಕ್ಷಕರ ದಿನ"ವನ್ನಾಚರಿಸಲಾಗುತ್ತದೆ.
ಸಾರಾಂಶ
ಪರಿಕಲ್ಪನೆ ೧
ಚಟುಟವಟಿಕೆ-೧
- ವಿಧಾನ/ಪ್ರಕ್ರಿಯೆ
- ಸಮಯ
- ಸಾಮಗ್ರಿಗಳು/ಸಂಪನ್ಮೂಲಗಳು
- ಹಂತಗಳು
- ಚರ್ಚಾ ಪ್ರಶ್ನೆಗಳು
ಚಟುಟವಟಿಕೆ-೨
- ವಿಧಾನ/ಪ್ರಕ್ರಿಯೆ
- ಸಮಯ
- ಸಾಮಗ್ರಿಗಳು/ಸಂಪನ್ಮೂಲಗಳು
- ಹಂತಗಳು
- ಚರ್ಚಾ ಪ್ರಶ್ನೆಗಳು
ಪರಿಕಲ್ಪನೆ ೨
ಚಟುಟವಟಿಕೆ-೧
- ವಿಧಾನ/ಪ್ರಕ್ರಿಯೆ
- ಸಮಯ
- ಸಾಮಗ್ರಿಗಳು/ಸಂಪನ್ಮೂಲಗಳು
- ಹಂತಗಳು
- ಚರ್ಚಾ ಪ್ರಶ್ನೆಗಳು