ದಕ್ಷಿಣ ಭಾರತದ ಭಾಷೆಗಳ ಮೂಲವೆಂದು ಗುರುತುಸಲ್ಪಟ್ಟಿರುವ ಮೂಲದ್ರಾವಿಡದಿಂದ ಕನ್ನಡವು ಯಾವಾಗ ಆಡುಭಾಷೆಯಾಗಿ ಪರಿವರ್ತಿತವಾಯಿತೆಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ತಮಿಳು ಭಾಷೆಯು ದ್ರಾವಿಡ ಭಾಷೆಯಿಂದ ಬೇರ್ಪಟ್ಟ ಸಮಯದಲ್ಲಿಯೇ ಕನ್ನಡವು ಕೂಡ ಆಡುಭಾಷೆಯಾಗಿ ಬೇರ್ಪಟ್ಟಿರಬಹುದೆಂದು ಹೇಳಲಾಗುತ್ತದೆ. ಈ ಭಾಷೆಯ ಲಿಪಿಯು ಸುಮಾರು ೧೫೦೦-೧೬೦೦ ವರ್ಷಗಳಿಗಿಂತಲೂ ಹಿಂದಿನದು. ಐದನೆಯ ಶತಮಾನದ ಹಲ್ಮಿಡಿ ಶಾಸನದ ಸಮಯಕ್ಕಾಗಲೇ ಕನ್ನಡವು ಸಾಕಷ್ಟು ಅಭಿವೃದ್ಧಿ ಹೊಂದಿತ್ತು. ಲಿಪಿಯ ಉಗಮದ ಇತಿಹಾಸವನ್ನು ಗಮನಿಸಿದರೆ, ತಮಿಳಿಗಿಂತಲೂ ಕನ್ನಡದ ಲಿಪಿಯೇ ಮೊಟ್ಟ ವೊದಲಿಗೆ ಹೆಚ್ಚು ಪ್ರವರ್ಧಮಾನಕ್ಕೆ ಬಂದಂತೆ ಕಾಣಿಸುತ್ತದೆ.}} | ದಕ್ಷಿಣ ಭಾರತದ ಭಾಷೆಗಳ ಮೂಲವೆಂದು ಗುರುತುಸಲ್ಪಟ್ಟಿರುವ ಮೂಲದ್ರಾವಿಡದಿಂದ ಕನ್ನಡವು ಯಾವಾಗ ಆಡುಭಾಷೆಯಾಗಿ ಪರಿವರ್ತಿತವಾಯಿತೆಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ತಮಿಳು ಭಾಷೆಯು ದ್ರಾವಿಡ ಭಾಷೆಯಿಂದ ಬೇರ್ಪಟ್ಟ ಸಮಯದಲ್ಲಿಯೇ ಕನ್ನಡವು ಕೂಡ ಆಡುಭಾಷೆಯಾಗಿ ಬೇರ್ಪಟ್ಟಿರಬಹುದೆಂದು ಹೇಳಲಾಗುತ್ತದೆ. ಈ ಭಾಷೆಯ ಲಿಪಿಯು ಸುಮಾರು ೧೫೦೦-೧೬೦೦ ವರ್ಷಗಳಿಗಿಂತಲೂ ಹಿಂದಿನದು. ಐದನೆಯ ಶತಮಾನದ ಹಲ್ಮಿಡಿ ಶಾಸನದ ಸಮಯಕ್ಕಾಗಲೇ ಕನ್ನಡವು ಸಾಕಷ್ಟು ಅಭಿವೃದ್ಧಿ ಹೊಂದಿತ್ತು. ಲಿಪಿಯ ಉಗಮದ ಇತಿಹಾಸವನ್ನು ಗಮನಿಸಿದರೆ, ತಮಿಳಿಗಿಂತಲೂ ಕನ್ನಡದ ಲಿಪಿಯೇ ಮೊಟ್ಟ ವೊದಲಿಗೆ ಹೆಚ್ಚು ಪ್ರವರ್ಧಮಾನಕ್ಕೆ ಬಂದಂತೆ ಕಾಣಿಸುತ್ತದೆ.}} |